ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

Prasthutha|

ಭಿಂಡ್: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಎಸ್ ಟಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಹರಿದು ಬಿಸಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಆರೋಪಿಸಿದ್ದಾರೆ.

- Advertisement -


ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಲೋಕಸಭೆ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ಎರಡು ಸಿದ್ಧಾಂತಗಳ ನಡುವಿನ ಹೋರಾಟವಾಗಿದೆ’ ಎಂದು ಹೇಳಿದ್ದಾರೆ.


‘ಸಂವಿಧಾನದಿಂದಾಗಿ ಬಡವರು, ಎಸ್ ಟಿಗಳು, ಒಬಿಸಿಗಳಿಗೆ ಹಲವು ಹಕ್ಕುಗಳು ದೊರೆತಿವೆ. ದೇಶದ ಜನರಿಗೆ ನರೇಗಾ, ಭೂಹಕ್ಕು, ಮೀಸಲಾತಿ ಸೇರಿದಂತೆ ಅನೇಕ ಹಕ್ಕುಗಳನ್ನು ನೀಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಕಿತ್ತು ಹಾಕಲಿದೆ’ ಎಂದು ಅವರು ಆರೋಪಿಸಿದ್ದಾರೆ.

Join Whatsapp