ಬೆಂಗಳೂರು; ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರೆಯೇ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಮಾತನಾಡಿದ ಅವರು, ಗಾಂಧಿಯನ್ನೇ ಕೊಂದು ಹಾಕಿದ್ದವರು ನನ್ನನ್ನು ಬಿಡುತ್ತಾರೆಯೇ?. ಇವರಿಗೆ ನಾನ್ಯಾವ ಲೆಕ್ಕ ಎಂದು ಬಿಜೆಪಿ ಕಾರ್ಯಕರ್ತರ ವಿರುದ್ಧ ಕಿಡಿ ಕಾರಿದರು.
ನನಗೆ ಯಾವುದೇ ಜೀವ ಬೆದರಿಕೆಯಿಲ್ಲ. ಜನರ ಆಶೀವಾರ್ದವಿದೆ. ಮುಂದೆ ಏಳೆಂಟು ತಿಂಗಳ ನಂತರ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಪೊಲೀಸರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಮಳೆಹಾನಿ ಪ್ರದೇಶಗಳಿಗೆಸಚಿವರು ಭೇಟಿ ನೀಡುತ್ತಾರೆ. ಪರಿಹಾರದ ಭರವಸೆ ನೀಡುತ್ತಾರೆ ಆದರೆ ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.
ಈ ಮಧ್ಯೆ ಸಿದ್ದರಾಮಯ್ಯ ಅವರಿಗೆ ರಕ್ಷಣೆ ನೀಡದೇ ಇರುವ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಎಂದು ಪ್ರಶ್ನಿಸಿದ್ದು, ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದೆ.
ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಆಗಸ್ಟ್ 26 ರಂದು ಕೊಡಗಿನಲ್ಲಿ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಒಂದು ಲಕ್ಷ ಮಂದಿಯನ್ನು ಸೇರಿಸಲು ಸಿದ್ದತೆ ನಡೆಸುತ್ತಿದೆ.
ಈ ಮೂಲಕ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರು ಬಿಜೆಪಿಗೆ ಟಕ್ಕರ್ ಕೊಡಲು ಮುಂದಾಗಿದೆ, ಇನ್ನೂ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಕರ್ನಾಟಕ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.
ರಿಜ್ವಾನ್ ಅರ್ಷದ್ ಎಚ್ಚರಿಕೆ: ನಾವೇನಾದರೂ ಮೊಟ್ಟೆ ಕೈಗೆ ತೆಗೆದುಕೊಂಡರೆ ಬೀದಿಯಲ್ಲಿ ಓಡಾಡಲು ಸಾಧ್ಯವಿಲ್ಲʼ ಎಂದು ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದ್ದಾರೆ
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮಗೆ ಶಕ್ತಿ ಇಲ್ಲ ಎಂದು ಇಲ್ಲಿ ಸೇರಿಲ್ಲ, ನಾವು ಗಾಂಧಿ ತತ್ವಕ್ಕೆ ಸೇರಿದವರು. ನಾವು ಅದಕ್ಕೆ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.