ತುಂಗಭದ್ರಾ ಜಲಾಶಯದ ರಕ್ಷಣೆಗೆ ಶತಪ್ರಯತ್ನ: ಡಿ.ಕೆ.ಶಿವಕುಮಾರ್

Prasthutha|

ಹೊಸಪೇಟೆ: ತುಂಗಭದ್ರಾ ಜಲಾಶಯದ ರಕ್ಷಣೆಗೆ ಶತಪ್ರಯತ್ನ ನಡೆಸಲಾಗುತ್ತಿದೆ. ನಾಲ್ಕೈದು ದಿನದೊಳಗೆ ಜಲಾಶಯದಲ್ಲಿ 53 ಟಿಎಂಸಿ ನೀರು ಉಳಿಸಲು ಕ್ರಮ ವಹಿಸಲಾಗುವುದು. ರೈತರಿಗೆ ನೀರು ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪರಿಣತರ ತಂಡ ಜಲಾಶಯದ ಗೇಟ್ ದುರಸ್ತಿಗೆ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹೇಳಿದರು.

- Advertisement -

ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ರವಿವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿ, ಶನಿವಾರ ರಾತ್ರಿ 10.50ಕ್ಕೆ 19ನೇ ಗೇಟ್ ಮುರಿದು ಬಿದ್ದಿದೆ. ತತ್ಕ್ಷಣ ತುಂಗಭದ್ರಾ ಮಂಡಳಿ ಅಧಿಕಾರಿಗಳು ಈ ಭಾಗದ ಜಿಲ್ಲಾಡಳಿತಗಳಿಗೆ ಮಾಹಿತಿ ರವಾನಿಸಿದ್ದಾರೆ. ಈಗ ನಾವು ರೈತರನ್ನು ಬದುಕಿಸಬೇಕಿದೆ. ಜಲಾಶಯದಿಂದ ನೀರಾವರಿ ಮಾಡಲು ಎರಡೂ ಬೆಳೆಗಳಿಗೂ 115 ಟಿಎಂಸಿ ನೀರು ದೊರೆಯಬೇಕಿದೆ. ಈಗ ನಾವು 53 ಟಿಎಂಸಿ ನೀರು ಉಳಿಸಬೇಕಿದೆ. 19ನೇ ಗೇಟ್ ಜತೆಗೆ ಇನ್ನೂ 10 ಗೇಟ್ ದುರಸ್ತಿ ಕೆಲಸವೂ ನಡೆಯಲಿದೆ ಎಂದರು.



Join Whatsapp