3 ಡಿಸಿಎಂ ಸ್ಥಾನಕ್ಕೆ ಹೈಕಮಾಂಡ್ ಗೆ ಪತ್ರ ಬರೆಯುತ್ತೇನೆ: ಸಚಿವ ರಾಜಣ್ಣ

Prasthutha|

ತುಮಕೂರು: ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಮಾಡಿ ಸಾಮುದಾಯಿಕ ಪ್ರಾತಿನಿಧ್ಯ ನೀಡಬೇಕು ಎಂದು ಸಹಕಾರ ಸಚಿವ ಕೆಎನ್ ಅವರು ಒತ್ತಾಯಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತರು, ವೀರಶೈವ ಲಿಂಗಾಯತ ಸಮುದಾಯಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕೇಳಿಕೊಳ್ಳಲಾಗುವುದು. ಅಕ್ಟೋಬರ್ ಮೊದಲ ವಾರ ಹೈಕಮಾಂಡ್ ಭೇಟಿಯಾಗಿ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸುವ ಮುಖಂಡರನ್ನು ಒಳಗೊಂಡ ನಿಯೋಗವನ್ನು ಹೈಕಮಾಂಡ್ ಬಳಿಗೆ ಕರೆದುಕೊಂಡು ಹೋಗುವ ಬಗ್ಗೆ ಚಿಂತಿಸಲಾಗುವುದು’ ಎಂದು ತಿಳಿಸಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕಿದೆ. ಇದಕ್ಕೆ ಎಲ್ಲಾ ಸಮುದಾಯಗಳ ಬೆಂಬಲ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂದಿದ್ದಾರೆ.