ವಿಮೆನ್ ಇಂಡಿಯಾ ಮೂವ್ಮೆಂಟ್ ಕಲ್ಲಡ್ಕ ವತಿಯಿಂದ ,78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಮಾಧ್ಯಮ ವಕ್ತಾರೆ ಶಾಹಿದಾ ತಸ್ನೀಂ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಅಳಿವು , ಉಳಿವಿನ ಬಗ್ಗೆ ಸವಿಸ್ತಾರವಾಗಿ ವಿಶ್ಲೇಷಿಸಿದರು.
WIM ಕಲ್ಲಡ್ಕದ ಕಾರ್ಯಕರ್ತೆಯರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುಮಯ್ಯ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.