ಕೊಡಗು | ಹುತಾತ್ಮ ಯೋಧನ ಕುಟುಂಬವನ್ನು ಭೇಟಿ ಮಾಡಿದ ವಿಮ್ ನಿಯೋಗ: ಸೌಲಭ್ಯ ಕಲ್ಪಿಸುವಂತೆ ಒತ್ತಾಯ

Prasthutha|

ಸಿದ್ದಾಪುರ: ಹುತಾತ್ಮ ಯೋಧ ಅಲ್ತಾಫ್ ಅಹ್ಮದ್ ಅವರ ಕುಟುಂಬವನ್ನು ಭೇಟಿ ಮಾಡಿದ ವಿಮನ್ ಇಂಡಿಯಾ ಮೂಮೆಂಟ್ ಸದಸ್ಯರು ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರು.

- Advertisement -

ಚೆನ್ನಯ್ಯನಕೋಟೆಯಲ್ಲಿರುವ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷೆ ನಫೀಸಾ ಅಕ್ಬರ್, 19 ವರ್ಷಗಳ ಕಾಲ ದೇಶ ಸೇವೆ ಮಾಡಿ, ಹುತಾತ್ಮರಾಗಿರುವ ಅಲ್ತಾಫ್ ಅಹಮದ್ ಅವರ ಕುಟುಂಬ ಸಂಕಷ್ಟದಲ್ಲಿದೆ. ಸರಕಾರ ಅವರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿದರು.

ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿ ನಾಗರತ್ನ ಮಾತನಾಡಿ, ಸ್ವಂತ ಮನೆ ಕೂಡಾ ಇಲ್ಲದ ಹುತಾತ್ಮ ಯೋಧನ ಕುಟುಂಬಕ್ಕೆ ಜಮೀನು ಹಾಗೂ ಮನೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ವ್ಯವಸ್ಥೆ ಜೊತೆಗೆ ಅವರ ಕುಟುಂಬ ನಿರ್ವಹಣೆಗೆ ಬೇಕಾದ ವ್ಯವಸ್ಥೆಗಳನ್ನು ಸರಕಾರ ಕೂಡಲೇ ಮಾಡಬೇಕೆಂದು ಅವರು ಒತ್ತಾಯಿಸಿದರು. ನಿಯೋಗದಲ್ಲಿ ಸಂಘಟನೆಯ ಉಪಾಧ್ಯಕ್ಷೆ ತನುಜಾವತಿ, ಕಾರ್ಯದರ್ಶಿ ಫೌಸಿಯಾ, ಪ್ರಮುಖರಾದ ಸೌದತ್ ಮತ್ತು ಆಯಿಶಾ ಇದ್ದರು.

Join Whatsapp