ದೆಹಲಿ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಕೊಲೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ

Prasthutha|

ಮಂಗಳೂರು: ದೆಹಲಿಯ ಸಾಬಿಯಾ ಸೈಫಿ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ.ಜಿಲ್ಲಾ ವತಿಯಿಂದ ಮಂಗಳೂರು ಮಿನಿ ವಿಧಾನ ಸೌಧದ ಎದುರುಗಡೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.


ವಿಮ್ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಮ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಂಗಳೂರು ಜಿಲ್ಲಾ ಮುಖಂಡರಾದ ಝಕಿಯಾ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿ, ದೆಹಲಿಯ ಘಟನೆಯನ್ನು ಖಂಡಿಸಿದರು.

- Advertisement -


ವಿಮ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಹಾಗೂ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ಹಾಜರಿದ್ದರು. ವಿಮ್ ಜಿಲ್ಲಾ ಸಮಿತಿ ಸದಸ್ಯೆ ಅಡ್ವೋಕೇಟ್ ರುಬಿಯಾ ಕಾರ್ಯಕ್ರಮವನ್ನು ನಿರೂಪಿಸಿದರು.

- Advertisement -