ಬೆಳಗಾವಿ ಸುವರ್ಣಸೌಧದಲ್ಲಿ ಡಿ. 11 ರಿಂದ ಚಳಿಗಾಲದ ಅಧಿವೇಶನ

Prasthutha|

  • ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಅಧಿವೇಷನಕ್ಕೆ ಸರಕಾರ ತಯಾರಾಗುತ್ತಿದ್ದು, ಬೆಳಗಾವಿಯ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ ಎರಡನೇ ವಾರದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.

ಸುವರ್ಣಸೌಧದಲ್ಲಿ ಡಿಸೆಂಬರ್ 11 ರಿಂದ 22 ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಸಲು ಪ್ರಸ್ತಾಪಿಸಲಾಗಿದ್ದು, ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

- Advertisement -

ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ವಿಷಯ ಮುಖ್ಯ ಅಜೆಂಡಾದಲ್ಲಿದೆ. ಜುಲೈನಲ್ಲಿ ಬಜೆಟ್ ಅಧಿವೇಶನ ನಡೆದಿದ್ದು, ನಿಯಮದ ಪ್ರಕಾರ ಆರು ತಿಂಗಳೊಳಗೆ ಅಧಿವೇಶನ ನಡೆಸಬೇಕಿದೆ. ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ದಿನಾಂಕ ಗೊತ್ತುಪಡಿಸಿ ರಾಜ್ಯಪಾಲರ ಅನುಮೋದನೆಗೆ ಶಿಫಾರಸು ಮಾಡುವ ಸಾಧ್ಯತೆ ಇದೆ