ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ: ಇಂದು ಸರ್ವಪಕ್ಷ ಸಭೆ

Prasthutha|

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

- Advertisement -

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.



Join Whatsapp