ಶ್ರೀನಗರ: ಕರ್ನಾಟಕದಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯಿರಿ ಜಮ್ಮು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.
ಬಾರಾಮುಲ್ಲಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ವೇಳೆ ಶಿರವಸ್ತ್ರ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆದೇಶದ ವಿಚಾರದಲ್ಲಿ ಈಗಿನ ಸರ್ಕಾರ ಮಧ್ಯಪ್ರವೇಶಿಸಬೇಕು. ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಇಂತಹ ಆದೇಶ ಮಾಡಲಾಗಿದೆ. ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇಂತಹ ಆದೇಶಗಳೆಲ್ಲಾ ಜಾರಿಮಾಡಿತ್ತು.
ಅದರಲ್ಲಿ ನಮ್ಮಗೆ ಆಶ್ಚರ್ಯ ಏನಿಸಿರಲಿಲ್ಲ. ಆದರೆ ,ಈಗ ಕಾಂಗ್ರೆಸ್ ಅಧಿಕಾರಾವಧಿಯಲ್ಲಿಯೂ ಇಂತಹ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಬೇಸರದ ಸಂಗತಿ. ಇದು ಅತ್ಯಂತ ದುರದೃಷ್ಟಕರ ಎಂದಿದ್ದಾರೆ.
ಕರ್ನಾಟಕದಲ್ಲಿ ಆ ಆದೇಶವನ್ನು ಹಿಂತೆಗೆದುಕೊಳ್ಳುವ ಕೆಲಸ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ವಿನಂತಿಸುತ್ತೇನೆ ಎಂದು ಉಮರ್ ಅಬ್ದುಲ್ಲಾ ಹೇಳಿದ್ದಾರೆ.