ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆದು ಒಬ್ಬರ ಆಹಾರ ಸಂಸ್ಕೃತಿ ರಕ್ಷಿಸಿದಂತಾಗಿದೆ: ನಟ ಚೇತನ್ ಅಹಿಂಸಾ

Prasthutha|

ಕಲಬುರಗಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದು ಒಬ್ಬರ ಆಹಾರ ಸಂಸ್ಕೃತಿಯನ್ನು ರಕ್ಷಿಸಿದಂತೆ ಆಗಲಿದೆ ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಿಚ್ಛೇದ 25ರ ಅಡಿ ಮತಾಂತರಗೊಳ್ಳುವುದು ಕಾನೂನು ಬದ್ಧವಾಗಿದೆ. ಅದು ಧಾರ್ಮಿಕ ಹಕ್ಕೂ ಆಗಿದೆ. ಆದಾಗ್ಯೂ, ಬಲವಂತದಿಂದ ಮತಾಂತರ ಮಾಡುವುದು ತಪ್ಪು. ತಮಗಿಷ್ಟ ಬಂದಂತಹ ಧರ್ಮವನ್ನು ಆಯ್ದುಕೊಳ್ಳುವುದಕ್ಕೆ ಸಂವಿಧಾನದಲ್ಲಿ ಅವಕಾಶವಿದೆ. ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ಒಳ್ಳೆಯದು ಎಂದರು.


ಇನ್ನು ಗೋಹತ್ಯೆ ನಿಷೇಧ ಕಾಯ್ದೆಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಟ ಚೇತನ್, ಇಡೀ ಜಗತ್ತಿನಲ್ಲಿ ಮಾಂಸ ರಫ್ತು ಮಾಡುವ ದೇಶಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ವಿದೇಶಗಳಿಗೆ ಮಾಂಸ ರಫ್ತು ಮಾರಾಟ ಮಾಡುವ ನಿಟ್ಟಿನಲ್ಲಿ ಪ್ರಾಣಿಗಳ ಹತ್ಯೆ ನಿಲ್ಲಬೇಕು. ಆದ್ರೆ, ಕೆಲವೊಂದು ಸಮುದಾಯಗಳು ಮಾಂಸಾಹಾರ ಸೇವಿಸುವ ಆಹಾರ ಸಂಸ್ಕೃತಿಯನ್ನು ಹೊಂದಿವೆ. ಅಂತವರ ಆಹಾರಕ್ಕೆ ಕಡಿವಾಣ ಹಾಕೋದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.



Join Whatsapp