Home ಟಾಪ್ ಸುದ್ದಿಗಳು ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿಂತಾಮಣಿ ಅಧಿಕಾರಿಗಳು | ಸಾರ್ವಜನಿಕರ ಆಕ್ರೋಶ

ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿಂತಾಮಣಿ ಅಧಿಕಾರಿಗಳು | ಸಾರ್ವಜನಿಕರ ಆಕ್ರೋಶ

ಚಿಂತಾಮಣಿ : ಕರ್ನಾಟಕದಲ್ಲಿ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಇದು ಆಹಾರದ ಹಕ್ಕಿನ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರನ್ನು ಲಸಿಕೆ ಹಾಕಿಕೊಳ್ಳುವಂತೆ ಒತ್ತಾಯಿಸುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಲಸಿಕೆ ಪಡೆಯದವರಿಗೆ ಪಡಿತರ ಸ್ಥಗಿತಗೊಳಿಸಲು ಸುತ್ತೋಲೆ ಹೊರಡಿಸುತ್ತಿದ್ದಾರೆ. ಆದರೂ, ಕಂದಾಯ ಸಚಿವ ಆರ್‌. ಅಶೋಕ್‌ ಮತ್ತು ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್‌ ಕತ್ತಿ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಬಾಗಲಕೋಟೆ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಅಲ್ಲಿನ ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಪಡಿತರವನ್ನು ಸ್ಮಗಿತಗೊಳಿಸಿದ್ದರು. ಇದರ ಬೆನ್ನಲ್ಲೇ ಚಿಂತಾಮಣಿ ತಾಲೂಕಿನ ತಹಶೀಲ್ದಾರ್‌, 2021ರ ಆಗಸ್ಟ್‌ 21ರಂದು ಪಡಿತರ ಸ್ಮಗಿತಗೊಳಿಸುವಂತೆ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದವರಿಗೆ ಸೂಚಿಸಿದ್ದಾರೆ.
ಕೋವಿಡ್ ಲಸಿಕೆ ಪಡೆಯದೇ ಇರುವ ಪಡಿತರ ಚೀಟಿದಾರರಿಗೆ ಪಡಿತರವನ್ನು ನೀಡಲಾಗುವುದಿಲ್ಲ ಎಂಬ ಬಗ್ಗೆ ಸೂಚನಾ ಫಲಕವನ್ನು ನ್ಯಾಯಬೆಲೆ ಅಂಗಡಿಯ ಮುಂದೆ ಕಡ್ಡಾಯವಾಗಿ ಪ್ರಕಟಿಸುವುದು” ಎಂದು ಸೂಚಿಸಿರುವುದು ಸೂಚನಾ ಪತ್ರದಿಂದ ತಿಳಿದು ಬಂದಿದೆ.

Join Whatsapp
Exit mobile version