ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಸುಳ್ಯ ಬಿಜೆಪಿ ಅಧ್ಯಕ್ಷನ ವಿರುದ್ಧ ಆರೋಪ ಸಾಬೀತು, ಜೈಲು ಶಿಕ್ಷೆ

Prasthutha|

ಸುಳ್ಯ: 2014ರ ಚುನಾವಣೆ ಸಂದರ್ಭ ಮರ್ಕಂಜದ ಕುಲ್ಕುಳಿ ಎಂಬಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸರಸ್ವತಿ ಕಾಮತ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲುವಾಸದ ತೀರ್ಪು ನೀಡಿದೆ.

- Advertisement -


ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ತನ್ನ ವಾಹನವನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದಲ್ಲದೆ ಕಾಲಿನಿಂದ ತನ್ನ ಮರ್ಮಾಂಗಕ್ಕೆ ತುಳಿದು, ಸೀರೆಯನ್ನು ಎಳೆದಿದ್ದಾರೆ, ಆ ವೇಳೆ ತನ್ನ ರಕ್ಷಣೆಗೆ ಬಂದ ಇಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ನೀಡಿದ್ದಾರೆಂದು ಸರಸ್ವತಿ ಕಾಮತ್ ಪೊಲೀಸರಿಗೆ ದೂರು ನೀಡಿದ್ದರು.


ಈ ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಆಗಿನ ಎಸ್ಪಿ ರವಿ ಬಿ.ಎಸ್. ಅವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಳ್ಯ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಸೋಮಶೇಖರ್ ರವರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆಯೆಂದು ಸೆಪ್ಟೆಂಬರ್ 6 ರಂದು ಸಂಜೆ ಜೈಲು ಶಿಕ್ಷೆ ತೀರ್ಪು ನೀಡಿದೆ.

Join Whatsapp