ಮಹಿಳೆ ಮೇಲೆ ಹಲ್ಲೆ, ರಾಜಕಾರಣಿ ವಿರುದ್ಧ ಪ್ರಕರಣ ದಾಖಲು: ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಬಿಜೆಪಿ

Prasthutha|

ನೋಯ್ಡಾ: ಹೌಸಿಂಗ್ ಸೊಸೈಟಿಯೊಳಗೆ ಮಹಿಳೆಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ನೋಯ್ಡಾ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

- Advertisement -

ಶ್ರೀಕಾಂತ್  ಬಿಜೆಪಿಯ ಕಿಸಾನ್ ಮೋರ್ಚಾದ ಸದಸ್ಯ ಮತ್ತು ಹಿರಿಯ ನಾಯಕರೊಂದಿಗಿನ ಆತನ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಪಕ್ಷದ ಸ್ಥಳೀಯ ಘಟಕವು ಆತ ಪಕ್ಷದ ಸದಸ್ಯನೇ ಅಲ್ಲ ಎಂದು ಹೇಳಿದೆ.

ಶ್ರೀಕಾಂತ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿರುವ ಆತನನ್ನು ಪತ್ತೆ ಹಚ್ಚಲು ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ ಅಂಕಿತಾ ಶರ್ಮಾ ನಿನ್ನೆ ತಿಳಿಸಿದ್ದರು .

- Advertisement -

ಶ್ರೀಕಾಂತ್ ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಮತ್ತು ಆಡಳಿತ ಪಕ್ಷದ ಯುವ ಕಿಸಾನ್ ಸಮಿತಿಯ ರಾಷ್ಟ್ರೀಯ ಸಂಯೋಜಕರಾಗಿ ಗುರುತಿಸಿಕೊಂಡಿದ್ದ. ಆತರೆ ಇದೀಗ ಬಿಜೆಪಿ ಸ್ಥಳೀಯ ಘಟಕವು ಆತ ನಮ್ಮ ಪಕ್ಷದ ಸದಸ್ಯ ಅಲ್ಲ, ಆತ ಪಕ್ಷದ ಪ್ರಾರ್ಥಮಿಕ ಸದಸ್ಯತ್ವವನ್ನೂ ಹೊಂದಿಲ್ಲ ಎಂದು ಹೇಳಿಕೆ ನೀಡಿದೆ.

Join Whatsapp