ಎಫ್ ಐಆರ್ ರದ್ದುಪಡಿಸುವಂತೆ ಸಚಿವಾಲಯದ ಹೊರಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Prasthutha|

ಮುಂಬೈ: ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದುಗೊಳಿಸುವಂತೆ ಒತ್ತಾಯಿಸಿ 60 ವರ್ಷದ ಮಹಿಳೆಯೊಬ್ಬರು ಇಲ್ಲಿನ ರಾಜ್ಯ ಸಚಿವಾಲಯದ ಹೊರಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -

ವಿಕ್ರೋಲಿ ಪಾರ್ಕ್ ಸೈಟ್ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಮಂತ್ರಾಲಯಕ್ಕೆ ಬಂದು ಪಾರ್ಕ್ ಸೈಟ್ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ಅನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು. ಆಕೆಯನ್ನು ಈ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ತನಗೆ ನ್ಯಾಯ ಸಿಗುತ್ತಿಲ್ಲ ಎಂದು ಭಾವಿಸಿ ಸಂಜೆ  ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾಳೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂತ್ರಾಲಯದ ಬಳಿ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿ ಆಕೆಯನ್ನು ತಡೆದು ವಶಕ್ಕೆ ತೆಗೆದುಕೊಂಡು  ಮರೈನ್ ಡ್ರೈವ್ ಪೊಲೀಸ್ ಠಾಣೆಗೆ ಕರೆದೊಯ್ದರು. ಅಲ್ಲಿ ಆಕೆಯ ವಿರುದ್ಧ ಐಪಿಸಿಯ ಸೆಕ್ಷನ್ 309 ರ ಅಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಕ್ಕಾಗಿ ಎಫ್ಐಆರ್ ದಾಖಲಿಸಲಾಗಿದೆ.

Join Whatsapp