Home ಕರಾವಳಿ ವಿಟ್ಲ | ಮನೆ ಮೇಲೆ ಉರುಳಿ ಬಿದ್ದ ಪಿಕಪ್ ವಾಹನ: ಮಹಿಳೆ ಗಂಭೀರ

ವಿಟ್ಲ | ಮನೆ ಮೇಲೆ ಉರುಳಿ ಬಿದ್ದ ಪಿಕಪ್ ವಾಹನ: ಮಹಿಳೆ ಗಂಭೀರ

ವಿಟ್ಲ: ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಮನೆಯೊಡತಿ ಗಂಭೀರವಾಗಿ ಗಾಯಗೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.


ಪಿಕಪ್ ಬಿದ್ದು ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯ ಒಳಗೆ ಮಹಿಳೆ ಮಲಗಿದ್ದ ಸಂದರ್ಭ ಘಟನೆಯಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ.


ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ ಎಂದು ತಿಳಿದು ಬಂದಿದೆ.


ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

Join Whatsapp
Exit mobile version