ಅಪಾರ್ಟ್’ಮೆಂಟ್ ಮೇಲಿಂದ ಬಿದ್ದು ಮಹಿಳೆ ಮೃತ್ಯು

Prasthutha|

ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ನಡೆದಿದೆ.

- Advertisement -


ಮೃತ ಮಹಿಳೆಯನ್ನು ಲಕ್ನೋ ಮೂಲದ ಅಮೃತಾ ಶರ್ಮ (27) ಎಂದು ಗುರುತಿಸಲಾಗಿದೆ. ಅಪಾರ್ಟ್‍ಮೆಂಟ್‍ನ 10ನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ. ಕೂಡಲೇ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.