Home ಟಾಪ್ ಸುದ್ದಿಗಳು ಚಿಕಿತ್ಸೆ ಸಿಗದೆ ಮಹಿಳೆ ಸಾವು; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಡಾ.ಕೆ.ಸುಧಾಕರ್

ಚಿಕಿತ್ಸೆ ಸಿಗದೆ ಮಹಿಳೆ ಸಾವು; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಡಾ.ಕೆ.ಸುಧಾಕರ್

ತುಮಕೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದ್ದು, ಎರಡು ವಾರದಲ್ಲಿ ವರದಿ ಸಂಗ್ರಹಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ಗರ್ಭಿಣಿ ಸೇರಿದಂತೆ ಯಾವೊಬ್ಬ ರೋಗಿಯ ದಾಖಲೆ, ಗುರುತಿನ ಕಾರ್ಡ್ ಪರಿಶೀಲಿಸದೆ ಚಿಕಿತ್ಸೆ ನೀಡಬೇಕು. ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ವೈದ್ಯರು, ಸಿಬ್ಬಂದಿಯನ್ನು ವಜಾ ಮಾಡಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಿದ್ದುಪಡಿ ತರಬೇಕಿದ್ದು, ಮುಂದಿನ ಅಧಿವೇಶನದಲ್ಲಿ ಕಾನೂನು ರಚಿಸಲಾಗುವುದು ಎಂದು ಹೇಳಿದರು.


ಜಿಲ್ಲಾ ಆಸ್ಪತ್ರೆಯಲ್ಲಿ ಇಂತಹ ಅಮಾನವೀಯ ಘಟನೆ ನಡೆಯಬಾರದಿತ್ತು. ಇದು ಸರ್ಕಾರದ ಘನತೆಗೆ ಧಕ್ಕೆಯುಂಟುಮಾಡುವ ವಿಷಯಯವಾಗಿದೆ. ಮುಂದೆ ಇಂತಹ ಕೆಟ್ಟ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Join Whatsapp
Exit mobile version