ಭಾರೀ ಮಳೆ: ತುಂಡಾದ ವಿದ್ಯುತ್ ತಂತಿ ತುಳಿದು ಮಹಿಳೆ ಮೃತ್ಯು

Prasthutha|

ಹಾಸನ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರಿನ ಬಳ್ಳೂರು ಗ್ರಾಮದಲ್ಲಿ ನಡೆದಿದೆ.

- Advertisement -

ರಂಗಮ್ಮ (60) ಮೃತ ದುರ್ದೈವಿ. ಭಾರೀ ಗಾಳಿ, ಮಳೆಯಿಂದ ಜನರು ಓಡಾಡುವ ರಸ್ತೆ ಮಧ್ಯೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದೇ ದಾರಿಯಲ್ಲಿ ರಂಗಮ್ಮ ಹಸು ಮೇಯಿಸಿಕೊಂಡು ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ರಂಗಮ್ಮ ಜೊತೆ ಇದ್ದ ಹಸು ಕೂಡ ವಿದ್ಯುತ್ ತಗುಲಿ ಸಾವನ್ನಪ್ಪಿದೆ.

- Advertisement -

ತಂತಿ ತುಂಡಾಗಿ ಬೀಳುವಂತಿದ್ದು ದುರಸ್ತಿ ಮಾಡುವಂತೆ ಒಂದು ತಿಂಗಳಿನಿಂದ ಗ್ರಾಮಸ್ಥರು ಚೆಸ್ಕಾಂ ಸಿಬ್ಬಂದಿಗೆ ಮನವಿ ಮಾಡಿದ್ದರು.

ಆದರೂ ಈ ಬಗ್ಗೆ ಅಧಿಕಾರಿಗಳು ಕ್ರಮಕೈಗೊಂಡಿರಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಮಹಿಳೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಒಂದು ವರ್ಷದ ಹಿಂದೆ ಇದೇ ಜಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರಂಗಮ್ಮ ಬಾಮೈದ ಯಜಮಾನ್ ಗೌಡ ಎಂಬುವವರು ಸಾವಿಗೀಡಾಗಿದ್ದರು.



Join Whatsapp