ರೈಲು ನಿಲ್ದಾಣದಲ್ಲಿ ವಿದ್ಯುತ್ ತಗುಲಿ ಮಹಿಳೆ ಮೃತ್ಯು

Prasthutha|

ಹೊಸದಿಲ್ಲಿ: ರೈಲು ನಿಲ್ದಾಣವೊಂದರಲ್ಲಿ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

- Advertisement -

ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಅವರು ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5.30 ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಬಂದಿದ್ದರು. ಅಲ್ಲಿ ನಿಂತಿದ್ದ ನೀರಿನಲ್ಲಿ ಮುಂದೆ ಹೋಗಲು ವಿದ್ಯುತ್ ಕಂಬವನ್ನು ಆಧಾರವಾಗಿ ಹಿಡಿದುಕೊಂಡಿದ್ದಾರೆ, ಆಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.

ತಕ್ಷಣವೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸುವ ಪ್ರಯತ್ನ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.