Home ಟಾಪ್ ಸುದ್ದಿಗಳು ಯುವತಿ ಮೇಲೆ ಗ್ಯಾಂಗ್ ರೇಪ್: ಇಬ್ಬರ ಬಂಧನ

ಯುವತಿ ಮೇಲೆ ಗ್ಯಾಂಗ್ ರೇಪ್: ಇಬ್ಬರ ಬಂಧನ

►ಕ್ಯಾಬ್ ಚಾಲಕರಾದ ದೀಪು, ಅಖಿಲೇಶ್ ಎಂಬವರಿಂದ ಕೃತ್ಯ

ಬೆಂಗಳೂರು: ಮದ್ಯ ಕುಡಿಸಿ ಮತ್ತಿನಲ್ಲಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಕಾಮುಕರನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ನಡೆಸಿದ ಕ್ಯಾಬ್ ಚಾಲಕರಾದ ದೀಪು ಹಾಗೂ ಅಖಿಲೇಶ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಯುವತಿಗೆ ಕಂಠಪೂರ್ತಿ ಕುಡಿಸಿದ ಅರೋಪಿಗಳು ಈಜಿಪುರ ಬಳಿ ಹೊರಟಿದ್ದ ಆಕೆಯನ್ನು ಡ್ರಾಪ್ ನೀಡುವ ನೆಪದಲ್ಲಿ ಬೈಕ್ ನಲ್ಲಿ ಹತ್ತಿಸಿಕೊಂಡು ಕರೆದೊಯ್ದು ಎಚ್ ಎಎಲ್ ನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ.

ಅತ್ಯಾಚಾರದ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು 25 ವರ್ಷದ ಯುವತಿಗೆ ಬೆದರಿಸಿದ್ದಾರೆ.

ಸಂತ್ರಸ್ತ ಯುವತಿಯು ಮನೆಯವರಿಗೆ ವಿಷಯ ತಿಳಿಸಿದ್ದು ಬಳಿಕ ಅವರು ಧೈರ್ಯ ತುಂಬಿದ್ದರಿಂದ ಎರಡು ದಿನದ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp
Exit mobile version