ಮತ ಕೇಂದ್ರದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Prasthutha|

ಕುರುಗೋಡು: ಮತದಾನ ಮಾಡಲು ಆಗಮಿಸಿದ್ದ ತುಂಬು ಗರ್ಭಿಣಿ ಮತ ಕೇಂದ್ರದಲ್ಲಿಯೇ ಸಹಜ ಹೆರಿಗೆಯಾದ ಅಪರೂಪದ ಘಟನೆ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228ರಲ್ಲಿ ನಡೆದಿದೆ.

- Advertisement -


ಮಣಿಲಾ ಎನ್ನುವ ನವಮಾಸ ತುಂಬಿದ ಗರ್ಭಿಣಿ ಬೆಳಿಗ್ಗೆ 10 ಗಂಟೆಗೆ ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ನಂತರ ಹೆರಿಗೆ ನೋವು ಕಾಣಿಸಿಕೊಂಡಿದೆ. ಮತದಾನ ಕೇಂದ್ರದಲ್ಲಿಯೇ ಸಹಜ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಕೂಡಲೇ ತಾಯಿ ಮತ್ತು ನವಜಾತ ಶಿಶುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.

Join Whatsapp