Home ಟಾಪ್ ಸುದ್ದಿಗಳು ಗರ್ಭಿಣಿಯನ್ನು ಅಡ್ಮಿಟ್ ಮಾಡಿಕೊಳ್ಳಲು ಆಸ್ಪತ್ರೆ ನಿರಾಕರಣೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ !

ಗರ್ಭಿಣಿಯನ್ನು ಅಡ್ಮಿಟ್ ಮಾಡಿಕೊಳ್ಳಲು ಆಸ್ಪತ್ರೆ ನಿರಾಕರಣೆ: ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ !

ತಿರುಪತಿ: ಗರ್ಭಿಣಿಯನ್ನು ಅಡ್ಮಿಟ್ ಮಾಡಿಕೊಳ್ಳಲು ಆಸ್ಪತ್ರೆ ನಿರಾಕರಣೆ ಮಾಡಿ ಮಹಿಳೆಯೊಬ್ಬರು ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡುತ್ತಿರುವ ಹೃದಯ ವಿದ್ರಾವಕ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.


ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ತಿರುಪತಿಯ ಹೆರಿಗೆ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, 100 ಹಾಸಿಗೆಗಳ ತಿರುಪತಿ ಹೆರಿಗೆ ಆಸ್ಪತ್ರೆಯಲ್ಲಿ ಬೆಡ್ ಇದ್ದರೂ ಆ ಮಹಿಳೆಯ ಜೊತೆಯಲ್ಲಿ ಯಾರೂ ಇಲ್ಲದ ಕಾರಣದಿಂದ ಆಕೆಯನ್ನು ದಾಖಲಿಸಲು ಆಸ್ಪತ್ರೆಯ ಸಿಬ್ಬಂದಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಅಷ್ಟರಲ್ಲಿ ಆಕೆಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಆಸ್ಪತ್ರೆ ಎದುರಿನ ರಸ್ತೆಯಲ್ಲೇ ಸ್ಥಳೀಯರು ಸೇರಿ ಹೆರಿಗೆ ಮಾಡಿಸಿದ್ದಾರೆ.


ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುರ್ತು ಪರಿಸ್ಥಿತಿಯಲ್ಲೂ ಆಸ್ಪತ್ರೆಯವರು ಬೇಜವಾಬ್ದಾರಿತನದಿಂದ ವರ್ತಿಸಿದ್ದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

Join Whatsapp
Exit mobile version