ಡಿವೈಡರ್ ಗೆ ಕಾರು ಡಿಕ್ಕಿ: ಮಹಿಳೆ ಸಾವು, ಇಬ್ಬರು ಗಂಭೀರ

Prasthutha|

ನೆಲ್ಯಾಡಿ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿಯ ಕರ್ಬಸಂಕ ಬಳಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -


ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಅನ್ನಪೂರ್ಣ(50) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಮೃತ ಮಹಿಳೆಯ ಪುತ್ರ ಅಶ್ವಿನ್(25) ಹಾಗೂ ಪತಿ ಭಾಸ್ಕರ(56)ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.


ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ರವಿ ಬಿ.ಎಸ್., ಸಬ್ ಇನ್ಸ್ಪೆಕ್ಟರ್ ರಾಜೇಶ್ ಕೆ.ವಿ., ನೆಲ್ಯಾಡಿ ಹೊರಠಾಣೆಯ ಹೆಡ್ ಕಾನ್ಸ್ಟೇಬಲ್ ಬಾಲಕೃಷ್ಣ, ಕುಶಾಲಪ್ಪ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp