ಹೊಸದಿಲ್ಲಿ: ಕಾಂಗ್ರೆಸ್ ನಿಂದ ‘ಭಾರತ್ ಜೋಡೋ’ ಯಾತ್ರೆ ಭರದಿಂದ ಸಾಗುತ್ತಿದ್ದು, ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಸ್ಥಳೀಯ ಮನ್ರೇಗಾ ಕಾರ್ಯಕರ್ತೆಯೊಬ್ಬರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ತಮಿಳುನಾಡು ಹುಡುಗಿಯನ್ನು ಮದುವೆಯಾಗಲು ಆಫರ್ ನೀಡಿರುವುದಾಗಿ ತಿಳಿಸಿದ್ದಾರೆ.
ಸಂವಾದದ ವೇಳೆ ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುವ ಕಾರಣ, ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಮಹಿಳೆಯೊಬ್ಬರು ಹೇಳಿದ್ದಾರೆ.
ಜೈರಾಮ್ ರಮೇಶ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿ ಅವರ ಫೋಟೋವನ್ನು ಹಂಚಿಕೊಂಡಿದ್ದು, ಇಂದು ಮಧ್ಯಾಹ್ನ ಮಾರ್ತಾಂಡಂನಲ್ಲಿ ಮಹಿಳಾ ಮನ್ರೇಗಾ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿಯವರು ಸಂವಾದ ನಡೆಸುತ್ತಿದ್ದರು. ಈ ವೇಳೆ ಮಹಿಳೆಯೊಬ್ಬರು ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಾರೆ ಎಂದು ತಿಳಿದಿದೆ ಮತ್ತು ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಮಹಿಳೆಯೊಬ್ಬರು ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.