Home ಟಾಪ್ ಸುದ್ದಿಗಳು ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ !

ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ !

ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಲಂಚ ಅಧಿಕಾರಿ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ.

Join Whatsapp
Exit mobile version