ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕನಿಗೆ ಮಹಿಳೆಯಿಂದ ಕಪಾಳಮೋಕ್ಷ

Prasthutha|

ಚಂಡೀಗಢ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಜನನಾಯಕ್ ಜನತಾ ಪಕ್ಷದ ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

- Advertisement -


ಪ್ರವಾಹ ಉಂಟಾಗಿದ್ದ ಕೈತಾಲ್ನ ಗುಹ್ಲಾ ಪ್ರದೇಶಕ್ಕೆ ಶಾಸಕರು ತೆರಳಿದ್ದರು. ಈ ವೇಳೆ ಕಳಪೆ ಒಳಚರಂಡಿ ವ್ಯವಸ್ಥೆಯಿಂದಾಗಿ ಈ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಶಾಸಕರ ಭೇಟಿ ತಡವಾಗಿದೆ ಎಂದು ಮಹಿಳೆ ಆರೋಪಿಸಿದ್ದಾಳೆ. ಅಲ್ಲದೇ ಭದ್ರತಾ ಸಿಬ್ಬಂದಿಯನ್ನು ಹಾಗೂ ಶಾಸಕರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಮಹಿಳೆಯನ್ನು ಕ್ಷಮಿಸಿದ್ದೇನೆ. ಮಹಿಳೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

- Advertisement -