ಮಂಗಳೂರು: ಹಾಡಹಗಲೇ ಮಹಿಳೆಗೆ ಚೂರಿ ಇರಿದು ಬರ್ಬರ ಹತ್ಯೆ !

Prasthutha|

ಮಂಗಳೂರು: ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಹಿಳೆಯ ಮೇಲೆ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಾಣಿಯ ನೇರಳಕಟ್ಟೆಯಲ್ಲಿ ನಡೆದಿದೆ.

- Advertisement -


ಅನಂತಾಡಿಯ ದೇವಿ ನಗರ ನಿವಾಸಿ ಶಕುಂತಳ(35) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.


ಶಕುಂತಳ ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಆಕ್ಟೀವಾ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಯುಧಗಳಿಂದ ದಾಳಿ ನಡೆಸಿದೆ. ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಬದುಕಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

Join Whatsapp