Home ಟಾಪ್ ಸುದ್ದಿಗಳು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಆರೋಪಿಗಳು ಬಿಡುಗಡೆ, ಹಾರ ತುರಾಯಿ ಹಾಕಿ ಸ್ವಾಗತ

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ: ಆರೋಪಿಗಳು ಬಿಡುಗಡೆ, ಹಾರ ತುರಾಯಿ ಹಾಕಿ ಸ್ವಾಗತ

ಬೆಳಗಾವಿ: ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಬಿಡುಗಡೆಯಾಗುತ್ತಿದ್ದಂತೆ ಆರೋಪಿಗಳಿಗೆ ಹೂವಿನ ಹಾರ ಹಾಕಿ, ಸಿಹಿ ತಿನ್ನಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದ್ದು, ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈಲಿನ ಎದುರೇ ಪ್ರಮುಖ ಆರೋಪಿ ಬಸಪ್ಪ ನಾಯ್ಕ್‌ಗೆ ಹೂಮಾಲೆ ಹಾಕಿ, ಸಿಹಿ ತಿನಿಸಿ ಸ್ವಾಗತ ಮಾಡಲಾಯಿತು. ಜೊತೆಗೆ ಆರೋಪಿಗಳನ್ನು ವಂಟಮೂರಿನಲ್ಲಿ ಮೆರವಣಿಗೆ ಮಾಡಲು ಆರೋಪಿಯ ಬೆಂಬಲಿಗರು ಮುಂದಾಗಿದ್ದರು. ಆದರೆ ಪೊಲೀಸರು ಅನುಮತಿ ನೀಡದ ಹಿನ್ನೆಲೆ ಮೆರವಣಿಗೆ ಕೈ ಬಿಟ್ಟು ಪಟಾಕಿ ಸಿಡಿಸಿ ಆರೋಪಿಗಳ ಬೆಂಬಲಿಗರು ಸಂಭ್ರಮಿಸಿದ್ದಾರೆ.

2023ರ ಡಿಸೆಂಬರ್​​ 10 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ, ಪ್ರೀತಿ ವಿಚಾರವಾಗಿ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಪ್ರಕರಣ ಸಂಬಂಧ ಕಾಕತಿ ಠಾಣೆ ಪೊಲೀಸರು 13 ಆರೋಪಿಗಳನ್ನ ಬಂಧಿಸಿ, ಹಿಂಡಲಗಾ ಜೈಲಿನಲ್ಲಿ ಇರಸಿದ್ದರು. ಇದೀಗ ಹೈಕೋರ್ಟ್‌ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಸೋಮವಾರ (ಏ.22) ರಾತ್ರಿ ಜೈಲಿನಿಂದ ಬಿಡುಗಡೆಯಾದರು.

Join Whatsapp
Exit mobile version