ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

Prasthutha|

ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಚಿತ್ರಾವತಿ ಬಳಿ ನಡೆದಿದೆ.

- Advertisement -

ಚಿತ್ರಾವತಿ ಬಳಿಯ ಡಿಎಡ್ ಕಾಲೇಜು ಬಳಿ ರಾಗಿ ಹೊಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅರೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಸಿಕ್ಕಿದೆ. ಮಹಿಳೆಯ ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಇನ್ನೂ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಮೃತ ಮಹಿಳೆ ಸರಿಸುಮಾರು 30 ವರ್ಷ ಪ್ರಾಯದವರಾಗಿದ್ದಾರೆ. ವೇಶ್ಯಾವಾಟಿಕೆಗೆ ಕರೆ ತಂದು ಯಾರಾದರೂ ಕೊಲೆ ಮಾಡಿ ಹೋಗಿದ್ದಾರಾ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು  ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp