Home ಟಾಪ್ ಸುದ್ದಿಗಳು ಕಲಬುರ್ಗಿ | ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಚಿಕಿತ್ಸೆಗಾಗಿ ಅಲೆದಾಡಿದ ಮಹಿಳೆ!

ಕಲಬುರ್ಗಿ | ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಚಿಕಿತ್ಸೆಗಾಗಿ ಅಲೆದಾಡಿದ ಮಹಿಳೆ!

ಕಲಬುರ್ಗಿ : ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಇತರ ಕಾಯಿಲೆಗಳಿಂದ ಬಳಲುತ್ತಿರುವವರೂ ಚಿಕಿತ್ಸೆಗಾಗಿ ಪರದಾಡುತ್ತಿದ್ದು, ಹಾಸಿಗೆ ಸಿಗದ ಕಾರಣ ಮಹಿಳೆಯೊಬ್ಬರು ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದಾಡಿದ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯನ್ನು ಕುಟುಂಬದವರು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದಾಗ ‘ಐಸಿಯು ಹಾಸಿಗೆ ಖಾಲಿ ಇಲ್ಲ’ ಎಂದು ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಿ ಕಳುಹಿಸಿದ್ದಾರೆ.

ನಂತರ ಮಹಿಳೆಯ ಕುಟುಂಬದವರು ಐಸಿಯು ಹಾಸಿಗೆಗಾಗಿ ಆಟೋದಲ್ಲಿ ಆಕ್ಸಿಜನ್ ಸಿಲಿಂಡರ್‌ನೊಂದಿಗೆ ನಾಲ್ಕು ಖಾಸಗಿ ಆಸ್ಪತ್ರೆಗಳು ಮತ್ತು ಇಎಸ್ಐ ಆಸ್ಪತ್ರೆಗೆ ಅಲೆದು ಜೇಮ್ಸ್ ಆಸ್ಪತ್ರೆಗೆ ಹೋದರೂ ಹಾಸಿಗೆ ಲಭ್ಯವಾಗದ ಕಾರಣ ಆಸ್ಪತ್ರೆಯ ಹೊರಗಡೆಯೇ ಕಾದು ಕುಳಿತಿದ್ದಾರೆ ಎಂದು ತಿಳಿದು ಬಂದಿದೆ.

ನಂತರ ಜೇಮ್ಸ್ ಆಸ್ಪತ್ರೆಯವರೇ ಐಸಿಯುನಲ್ಲಿ ಹಾಸಿಗೆಯ ವ್ಯವಸ್ಥೆ ಮಾಡಿ ಕೊರೋನಾ ತಪಾಸಣೆ ಮಾಡಲಾಗಿದ್ದು, ಒಂದೇ ಯಂತ್ರದಲ್ಲಿ ಎರಡು ಫ್ಲೋ ಮೀಟರ್ ಅಳವಡಿಸಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ.

Join Whatsapp
Exit mobile version