ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Prasthutha|

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ.

- Advertisement -


ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.


ತಮ್ಮ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಹಲವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ, ಈ ಸಂಬಂಧ ಎಸ್ ಐಟಿ ತನಿಖೆಗೆ ಸಹಕರಿಸಬೇಕೆಂದು ಮಾಜಿ ಸಿಎಂ ಯಡಿಯೂರಪ್ಪನವರ ಮನೆಗೆ ಹೋಗಿದ್ದಾಗ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Join Whatsapp