ಚಿಕ್ಕಮಗಳೂರು: ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಬಲಿ !

Prasthutha|

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ.

- Advertisement -

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಲ್ಲದೇವರ ತಾಂಡ್ಯದ ಸರೋಜಾ(45) ಆನೆ ದಾಳಿಯಿಂದ ಮೃತಪಟ್ಟ ಮಹಿಳೆ ಎಂದು ಗುರತಿಸಲಾಗಿದೆ.

ಕಾಡಾನೆ ದಾಳಿಯು ಮಲೆನಾಡು ಭಾಗದಲ್ಲಿ ದಿನೇದಿನೇ ಹೆಚ್ಚುತ್ತಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮಕೈಗೊಂಡು ನ್ಯಾಯ ದೊರಕಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Join Whatsapp