ರಾಯಚೂರು: ಮಹಿಳೆಯೊಬ್ಬರು ಬೆಂಕಿಯಲ್ಲಿ ಸುಟ್ಟುಕರಕಲಾದ ಘಟನೆ ಇಂದು ಬೆಳಗ್ಗೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದ ಗುಂಡುರಾವ್ ಕಾಲೊನಿಯಲ್ಲಿ ನಡೆದಿದೆ.
ಮಂಜುಳಾ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿದಾಗ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿತ್ತು. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ.