Home Uncategorized ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ: ಅಭಿಮಾನಿಯ ಪೋಸ್ಟರ್ ವೈರಲ್

ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ: ಅಭಿಮಾನಿಯ ಪೋಸ್ಟರ್ ವೈರಲ್

ಮುಂಬೈ: `ಈ ಸಲ ಕಪ್ ನಮ್ದೇ’ ಎಂದು ಹೇಳುತ್ತಾ ಪ್ರತೀ ವರ್ಷ ಐಪಿಎಎಲ್‌ನಲ್ಲಿ ಪಾಲ್ಗೊಳ್ಳುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಇಲ್ಲಿಯವರೆಗಿನ 14 ಆವೃತ್ತಿಗಳಲ್ಲಿ ಒಮ್ಮೆಯೂ ʻಕಪ್ ನಮ್ದಾಗಿಸಿಲ್ಲʼ. 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿಸಿದರೂ, ಕ್ರಮವಾಗಿ ಡೆಕ್ಕನ್ ಚಾರ್ಜರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಮುಗ್ಗರಿಸಿ ಚಾಂಪಿಯನ್ ಪಟ್ಟದಿಂದ ʻಸಾಮಾಜಿಕ ಅಂತರʼ ಕಾಪಾಡಿಕೊಂಡು ಬಂದಿದೆ.

ಮಂಗಳವಾರ ನಡೆದ ಐಪಿಎಲ್ 15ನೇ ಆವೃತ್ತಿಯ 22ನೇ ಪಂದ್ಯದಲ್ಲಿ ಆರ್‌ಸಿಬಿ, ಚೆನ್ನೈ ವಿರುದ್ಧ 23 ರನ್‌ಗಳ ಅಂತರದಲ್ಲಿ ಶರಣಾಗಿತ್ತು. ಈ ಪಂದ್ಯ ವೀಕ್ಷಿಸಲು ಬಂದಿದ್ದ ಅಭಿಮಾನಿಯೊಬ್ಬರು ಹಿಡಿದಿದ್ದ ಪೋಸ್ಟರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ರಾಯಲ್ ಚಾಲೆಂಜರ್ಸ್ ತಂಡದ ಅಭಿಮಾನಿಯಾಗಿರುವ ಯುವತಿಯು, ʻಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ ʼ ಎಂದು ಬರೆದ ಪೋಸ್ಟರ್ ಅನ್ನು ಪ್ರದರ್ಶಿಸಿದ್ದು, ಇದು ನೇರಪ್ರಸಾರದಲ್ಲಿ ಕ್ಯಾಮೆರಾಮೆನ್ ಕಣ್ಣಿಗೆ ಬಿದ್ದಿದೆ. ಈಕೆಯ ಪೋಸ್ಟರ್ ಎಲ್ಲೆಡೆ ವೈರಲ್ ಆಗಿದೆ.

ಆರ್‌ಸಿಬಿ ಕಟ್ಟಾ ಅಭಿಮಾನಿಯ ಪೋಸ್ಟ್ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಸಾಕಷ್ಟು ಟ್ರೋಲ್‌ಗಳು ಹರಿದಾಡುತ್ತಿವೆ. ಖ್ಯಾತ ಕ್ರಿಕೆಟಿಗ ಅಮಿತ್ ಮಿಶ್ರಾ ಈ ಚಿತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ʼಈಕೆಯ ಹೆತ್ತವರ ಕುರಿತು ಚಿಂತಿತನಾಗಿದ್ದೇನೆ ಎಂದು ವ್ಯಂಗವಾಡಿದ್ದಾರೆ.

https://twitter.com/jaattii/status/1513941577684910081?ref_src=twsrc%5Etfw%7Ctwcamp%5Etweetembed%7Ctwterm%5E1513941577684910081%7Ctwgr%5E%7Ctwcon%5Es1_&ref_url=https%3A%2F%2Fwww.eedina.com%2Fcricket%2Ffan-says-no-marriage-till-rcb-win-trophy-3016.html


ಸೋಲಿನ ಸರಪಳಿ ಕಳಚಿದ ಚೆನ್ನೈ ಸೂಪರ್ ಕಿಂಗ್ಸ್
ಐಪಿಎಲ್ 2022 ಟೂರ್ನಿಯಲ್ಲಿ ಸತತ ನಾಲ್ಕು ಸೋಲಿನಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್, ಕೊನೆಗೂ ಸೋಲಿನ ಸರಪಳಿಯಿಂದ ಹೊರಬಂದಿದೆ. ಮಂಗಳವಾರ ನಡೆದ ಟೂರ್ನಿಯ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚೆನ್ನೈ 23 ರನ್‌ಗಳಿಂದ ಭರ್ಜರಿಯಾಗಿ ಸೋಲಿಸಿ ಅಂಕಪಟ್ಟಿಯಲ್ಲಿ ಖಾತೆ ತೆರೆಯಲು ಯಶಸ್ವಿಯಾಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ರಾಬಿನ್ ಉತ್ತಪ್ಪ ಮತ್ತು ಶಿವಮ್ ದುಬೆ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 4 ವಿಕೆಟ್ ನಷ್ಟದಲ್ಲಿ 216 ರನ್ ದಾಖಲಿಸಿತ್ತು. ಕಠಿಣ ಗುರಿ ಬೆಂಬತ್ತಿದ ಬೆಂಗಳೂರು 9 ವಿಕೆಟ್ ನಷ್ಟದಲ್ಲಿ 193 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಸೋಲಿನೊಂದಿಗೆ ಬೆಂಗಳೂರು ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿಯಿತು.

Join Whatsapp
Exit mobile version