ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶಕ್ಕೆ ಅನುಮತಿ: ಕೇಂದ್ರ ಸರ್ಕಾರ

Prasthutha|

ನವದೆಹಲಿ: ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

- Advertisement -

ಭಾರತೀಯ ನೌಕಾಪಡೆಯು ಕಾರ್ಯನಿರ್ವಾಹಕ ಶಾಖೆಯ ಸಾಮಾನ್ಯ ಸೇವೆ (ಎಕ್ಸ್) ಕೇಡರ್, ಐಟಿ, ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಶಾಖೆಯಲ್ಲಿ ಭಾರತೀಯ ನೌಕಾಪಡೆ ವಿಶ್ವವಿದ್ಯಾಲಯ ಪ್ರವೇಶ ಯೋಜನೆಯಡಿ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಹೈಕೋರ್ಟ್ ಗೆ ತಿಳಿಸಲಾಯಿತು.

ಕೇಂದ್ರದ ವಾದವನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರ ಪೀಠವು, ಭಾರತೀಯ ನೌಕಾ ವಿಶ್ವವಿದ್ಯಾಲಯದ ಕೆಲವು ಶಾಖೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

- Advertisement -

ಕೆಲವು ನೌಕಾ ವಿಶ್ವವಿದ್ಯಾಲಯಗಳಲ್ಲಿ ಮಹಿಳಾ ಅಭ್ಯರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಈ ಸಂಬಂಧ ಹೈಕೋರ್ಟ್ ಪುರುಷ ಅಭ್ಯರ್ಥಿಗಳಿಗೆ ಸಮಾನವಾಗಿ ಮಹಿಳೆಯರ ಪ್ರವೇಶವನ್ನು ಅನುಮತಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಬೇಕೆಂದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.



Join Whatsapp