ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಮೃತ್ಯು

Prasthutha|

- Advertisement -

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ನಡೆದಿದೆ.

ಮೀನಾ (45) ಮೃತ ಕಾರ್ಮಿಕ ಮಹಿಳೆ.

- Advertisement -

ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಬುಧವಾರ ಬೆಳಿಗ್ಗೆ ಮೀನಾ ತೋಟಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ಕಾಡಾನೆ ತುಳಿತದಿಂದ ಮೀನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version