ಕೋಲಾರ: ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಬುರ್ಕಾ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆಯ ತಹಶೀಲ್ದಾರ್ ಕಚೇರಿ ಬಳಿನ ಡೆದಿದೆ
ಕೌಸರ್ (37) ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ಸಿಲುಕಿ ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ ಎನ್ನಲಾಗಿದೆ.
ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.