Home ಟಾಪ್ ಸುದ್ದಿಗಳು ಬಿಜೆಪಿಯಲ್ಲಿ  ಮಹಿಳೆಯರಿಗೆ ಗೌರವವಿಲ್ಲ: ಬಿ.ಕೆ ಹರಿಪ್ರಸಾದ್

ಬಿಜೆಪಿಯಲ್ಲಿ  ಮಹಿಳೆಯರಿಗೆ ಗೌರವವಿಲ್ಲ: ಬಿ.ಕೆ ಹರಿಪ್ರಸಾದ್

ಬೆಂಗಳೂರು: ಬಿಜೆಪಿಗರಿಗೆ ಮಹಿಳೆಯರ ಮೇಲೆ ಕಿಂಚಿತ್ತೂ ಗೌರವವಿಲ್ಲ. ಆಚಾರವಿಲ್ಲದ ನಾಲಿಗೆ ನೀಚ ಗುಣವನ್ನೇ ಎತ್ತಿ ತೋರಿಸುತ್ತಿದೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲಿನ ಗೌರವ ಎಷ್ಟಿದೆ ಎಂಬುವುದಕ್ಕೆ ಯತ್ನಾಳ್ ಹೇಳಿಕೆ ಕೈಗನ್ನಡಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯತ್ನಾಳ್ ಹೇಳಿಕೆ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನ. ಮಾತೆ,ಸಂಸ್ಕೃತಿ ಎಂದು ಬೊಗಳೆ ಭಾಷಣ ಮಾಡುವ ಬಿಜೆಪಿ ನಾಯಕರು ಕೂಡಲೇ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಛಾಟಿಸಿ,ಮಹಿಳಾ ಸಮುದಾಯಕ್ಕೆ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.

Join Whatsapp
Exit mobile version