ಚೈತ್ರ ಕುಂದಾಪುರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಆಗ್ರಹ

Prasthutha|

ಸುರತ್ಕಲ್ ನಲ್ಲಿ ನಿನ್ನೆ ವಿಶ್ವಹಿಂದು ಪರಿಷತ್ ಭಜರಂಗದದ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಎಂಬಾಕೆ ಮುಸ್ಲಿಂ ಸಮುದಾಯವನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಂತ ತುಚ್ಚವಾದ ಭಾಷೆಯಲ್ಲಿ ನಿಂದಿಸಿ ಕೋಮು ಪ್ರಚೋದನಕಾರಿ ಭಾಷಣ ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಘಟನೆಯನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ತೀವ್ರವಾಗಿ ಖಂಡಿಸಿದ್ದು, ಈಕೆಯ ವಿರುದ್ಧ ಪೋಲಿಸ್ ಇಲಾಖೆ ಸುಮೊಟೋ ಕೇಸ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಂಘಪರಿವಾರ ಒಡೆದು ಆಳುವ ನೀತಿಯ ಭಾಗವಾಗಿ ದೇಶದೆಲ್ಲೆಡೆ ಅರಾಜಕತೆ ಸೃಷ್ಟಿಸುತ್ತಿದೆ .ಅದರ ಮುಂದುವರಿದ ಭಾಗವಾಗಿ ಇಂತಹ ಯುವತಿಯರನ್ನು ಬಳಸಿಕೊಂಡು ಭಾಷಣ ಮಾಡಿಸಿ ಹಿಂದೂ ಮಹಿಳೆಯರನ್ನು ಭಾವನಾತ್ಮಕವಾಗಿ ಪ್ರಚೋದಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಭಾರತದಲ್ಲಿ ಕರಾಳ ಕಾನೂನುಗಳ ವಿರುದ್ಧ ನ್ಯಾಯಯುತವಾಗಿ ಧ್ವನಿ ಎತ್ತಿದ ಮಹಿಳೆಯರ ಮೇಲೆ ಯುಎಪಿಎ ಯಂತಹ ಕರಾಳ ಕಾನೂನುಗಳನ್ನು ಬಳಸಿಕೊಂಡು ಬಂಧಿಸುವ ಪೋಲಿಸ್ ಮತ್ತು ಸರ್ಕಾರ ಇಂತಹ ಕ್ರಿಮಿಗಳ ಮೇಲೆ ಮೃದು ಧೋರಣೆ ತೋರಿ ಇವರ ಕೋಮು ದ್ವೇಷದ ಭಾಷಣ ಮತ್ತು ಪ್ರವೃತ್ತಿಗಳಿಗೆ ಪ್ರೇರಣೆ ನೀಡುತ್ತಿದೆ. ಇದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

- Advertisement -

ದ್ವೇಷ ಭಾಷಣ ಮಾಡಿ ಮುಸ್ಲಿಂ ಮಹಿಳೆಯರ ಸಾಮೂಹಿಕವಾಗಿ ಮಾನಹರಣ, ಬಲಾತ್ಕಾರ ವಾಗಿ ಮತಾಂತರ ಮಾಡಲು ಪ್ರೇರಣೆ ಮತ್ತು ಹಿಂದೂ – ಮುಸ್ಲಿಮರ ನಡುವೆ ದ್ವೇಷ ಬಿತ್ತುವಂತಹ ಹೇಳಿಕೆಗಳನ್ನು ಕಾನೂನಿಗೆ ಗೌರವ ನೀಡದೆ ಬಹಿರಂಗವಾಗಿ ಹೇಳಿಕೆ ನೀಡಿದ  ಚೈತ್ರಾ ಕುಂದಾಪುರಳ ವಿರುದ್ಧ ಹಾಗೂ ಈ ಸಭೆಯ ಆಯೋಜಕರ ವಿರುದ್ಧ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು, ಇಲ್ಲದಿದ್ದಲ್ಲಿ ವಿಮ್ ವತಿಯಿಂದ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Join Whatsapp