ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Prasthutha|

ಮಂಗಳೂರು: ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿದ್ದನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡಿಸಿದೆ.

- Advertisement -

ಪ್ರಕರಣದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ನಿವಾಸಿ ವಿದ್ಯಾರ್ಥಿ ಎಂದು ಮಾಹಿತಿ ತಿಳಿದು ಬಂದಿರುತ್ತದೆ. ಆರೋಪಿಯು ಕಡಬ ಕಾಲೇಜು ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ ಮತ್ತು ನೀಲಿ ಪ್ಯಾಂಟ್ ಧರಿಸಿ ಆಗಮಿಸಿದ್ದು ಪರೀಕ್ಷೆ ಗೆ ಸಿದ್ದರಾಗುತಿದ್ದ ಇತರ ವಿದ್ಯಾರ್ಥಿಗಳೊಂದಿಗೆ ಜಗುಳಿಯಲ್ಲಿ ಕುಳಿತಿದ್ದ ಎನ್ನಲಾಗಿದೆ. ಪರಿಸರದ ಇತರ ಕಾಲೇಜಿನಿಂದಲೂ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿದ್ದರಿಂದ ಈತನ ಬಗ್ಗೆ ಯಾರಿಗೂ ಅರಿವಾಗಲಿಲ್ಲ ಎಂದು ಪೋಲೀಸರು ಹೇಳಿಕೆ ನೀಡಿರುತ್ತಾರೆ ವಿದ್ಯಾರ್ಥಿಗಳು ಆತನನ್ನು ಬಿನ್ನಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ತಿಳಿಸಿದೆ.

ಆರೋಪಿಗೆ ಅದೇ ದಿವಸ ಶಾಲಾ ಪರೀಕ್ಷೆ ನಡೆಯುತ್ತಿರುವುದು, ಅದೇ ಬಣ್ಣದ ಸಮವಸ್ತ್ರ ಎಲ್ಲಿಂದ ದೊರೆಯಿತು ಎಂಬುದರ ಬಗ್ಗೆನೂ ಪೋಲೀಸ್ ಇಲಾಖೆ ತನಿಖೆ ನಡೆಸಬೇಕು. ವಿದ್ಯಾರ್ಥಿನಿಯರಿಗಾದ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ಆಡಳಿತ ನಡೆಸುವ ಕಾಂಗ್ರೇಸ್ ಸರಕಾರ ಮತ್ತು ಸಂಭದಪಟ್ಟ ಅಧಿಕಾರಿಗಳು ಕೂಡಾ ಇಂತಹ ಘಟನೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಎಚ್ಚರ ವಹಿಸಬೇಕು ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಯಾವುದೇ ಆತಂಕ ಭಯವಿಲ್ಲದೆ ನಿರ್ಭಯವಾಗಿ ವಿದ್ಯೆ ಕಲಿಯುವಂತಹ ವಾತಾವರಣ ಸೃಷ್ಟಿಯಾಗಬೇಕೆಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸುತ್ತದೆ ಎಂದು ವಿಮೆನ್‌ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



Join Whatsapp