ಮಂಗಳೂರು: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ

Prasthutha|

ಮಂಗಳೂರು: ಪೆನ್ ಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ನನ್ನು ಬಂಧಿಸುವಂತೆ ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಸಿದರು.

- Advertisement -


ಬಳಿಕ ಮಾತನಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು, ಬಿಜೆಪಿಯ ಎನ್ ಡಿಎ ಮೈತ್ರಿಕೂಟದ ಜೆಡಿಎಸ್ನ ಸಂಸದ ಪ್ರಜ್ವಲ್ ರೇವಣ್ಣ ಅದೆಷ್ಟೋ ಮಹಿಳೆಯರ ಜೀವನದೊಂದಿಗೆ ಚೆಲ್ಲಾಟವಾಡಿದ್ದಾರೆ. ಅವರನ್ನು ಬಂಧಿಸಲು ಸರಕಾರ ವಿಫಲವಾಗಿದೆ. ಮಾತ್ರವಲ್ಲದೆ ಆತನಿಗೆ ವಿದೇಶಕ್ಕೆ ಪರಾರಿಯಾಗಲು ಅನುಕೂಲ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.


ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ಇದರ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾರ್ಯದರ್ಶಿ ಶಮಿಮಾ ತುಂಬೆ, ಪುತ್ತೂರಿನ ಅಧ್ಯಕ್ಷೆ ಝಾಹಿದಾ ಸಾಗರ್, ಮಿಸ್ರಿಯಾ ಮೈಸೂರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.



Join Whatsapp