Home ಟಾಪ್ ಸುದ್ದಿಗಳು ಸಾಂತ್ವನ ಕೇಂದ್ರ ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ಧ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ

ಸಾಂತ್ವನ ಕೇಂದ್ರ ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ಧ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ

ಬೆಂಗಳೂರು; ಮಹಿಳಾ ದೌರ್ಜನ್ಯ ಪ್ರಕರಣಗಳಿಂದ ಮಹಿಳೆಯರಿಗೆ ರಕ್ಷಣೆ ನೀಡುವ ಸಾಂತ್ವನ ಕೇಂದ್ರಗಳನ್ನು ಮುಚ್ಚಿರುವ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ಧೋರಣೆ ವಿರುದ್ಧ ವಿವಿಧ ಮಹಿಳಾ ಸಂಘಟನೆಗಳು ನಗರದ ಪ್ರಿಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದವು.


ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು. ಮುಚ್ಚಿರುವ ಸಾಂತ್ವನ ಕೇಂದ್ರಗಳನ್ನು ಕೂಡಲೇ ತೆರೆಯುವಂತೆ ಪ್ರತಿಭಟನಕಾರರು ಆಗ್ರಹಿಸಿದರು. ಇವರಿಗೆ ಒತ್ತಾಸೆಯಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಲೇ ಮುಚ್ಚಿರುವ ಸಾಂತ್ವನ ಕೇಂದ್ರಗಳನ್ನು ತೆರೆಯುಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯುಕ್ತರಾದ ಅನುರಾಧ ಧರಣಿ ಸ್ಥಳಕ್ಕೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇವೆ. ಧರಣಿ, ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು. ಬಳಿಕ ಸಂಘಟನೆಯ ಕೆಲ ಪ್ರತಿನಿಧಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ನಡೆಸಿದರು

Join Whatsapp
Exit mobile version