ಉತ್ತರ ಪ್ರದೇಶ: ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸುತ್ತಿರುವ ಭಾರೀ ಸಂಖ್ಯೆಯ ಮಹಿಳೆಯರು

Prasthutha|

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡ 40 ರಷ್ಟು ಟಿಕೆಟ್‌ ಮೀಸಲಿಡುವುದಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಘೋಷಿಸಿದ್ದರು. ಇದರ ಬೆನ್ನಲ್ಲೇ, ಭಾರಿ ಸಂಖ್ಯೆಯಲ್ಲಿ ಮಹಿಳಾ ಅಭ್ಯರ್ಥಿಗಳು ಕಾಂಗ್ರೆಸ್‌ ಮೊರೆ ಹೋಗಿದ್ದಾರೆ.

- Advertisement -

‘ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ 121 ಸ್ಥಾನಗಳಿಗಾಗಿ 400 ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪಕ್ಷದಿಂದ ಟಿಕೆಟ್‌ ಬಯಸುತ್ತಿರುವವರ ಮಹಿಳೆಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಲ್ಲಿ ಪಕ್ಷದ ಹಿರಿಯ ನಾಯಕರ ಕುಟುಂಬದವರು, ಮಕ್ಕಳು, ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ’ ಎಂದು ಉತ್ತರ ಪ್ರದೇಶದ ಹಿರಿಯ ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದ್ದಾರೆ.

‘ಆರು ಸ್ಥಾನಗಳಿರುವ ಮುರಾದಾಬಾದ್ ಜಿಲ್ಲೆಯೊಂದರಲ್ಲೇ 12ಕ್ಕೂ ಹೆಚ್ಚು ಮಹಿಳೆಯರು ಟಿಕೆಟ್‌ ಬಯಸಿದ್ದಾರೆ. ರಾಜ್ಯದ ಇತರೆ ಭಾಗಗಳಿಂದಲೂ ಅರ್ಜಿಗಳು ಬಂದಿವೆ. ಗೆಲ್ಲುವ ಸಾಮರ್ಥ್ಯದ ಆಧಾರದ ಮೇಲೆ ನಾವು ಅಭ್ಯರ್ಥಿಯ ಆಯ್ಕೆಯನ್ನು ಮಾಡಲಿದ್ದೇವೆ. ಈ ಬಗ್ಗೆ ಪ್ರಿ ಯಾಂಕಾ ಅವರು ನಿರ್ಧಾರ ಕೈಗೊಳ್ಳಿದ್ದಾರೆ’ ಎಂದು ಅವರು ಹೇಳಿದರು.



Join Whatsapp