ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಧ್ವಂಸಗೈದ ಮಹಿಳಾ ಪೊಲೀಸರು

Prasthutha|

ಮುಂಬೈ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬನ ಮನೆಯನ್ನು ಮಹಿಳಾ ಪೊಲೀಸರು ಬುಲ್ಡೋಜರ್‌ನಿಂದ ಧ್ವಂಸಗೊಳಿಸಿದ್ದಾರೆ.

- Advertisement -

ಮಧ್ಯಪ್ರದೇಶದ ದಾಮೋಯಿಲ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಕೆಡವಿದ್ದಾರೆ. ಈ ಕುರಿತ ವಿಡಿಯೋ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದರು. ಆದರೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೌಶಲ್ ಕಿಶೋರ್ ಚೌಬೆ ಎಂಬಾತನ ಮನೆಯನ್ನು ಮಹಿಳಾ ಅಧಿಕಾರಿಗಳು ಬುಲ್ಡೋಜರ್ ಬಳಸಿ ಕೆಡವಿದ್ದಾರೆ.

- Advertisement -

ಕಿಶೋರ್ ಚೌಬೆ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ.

ಆರೋಪಿಯು ಸುಮಾರು 75 ಲಕ್ಷ ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದನು. ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಈ ಕ್ರಮ ಕೈಗೊಳ್ಳಲಾಗಿದೆ. ಮನೆಯನ್ನು ಕೆಡವಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



Join Whatsapp