Home ಟಾಪ್ ಸುದ್ದಿಗಳು ನಾಗಮಂಗಲ ಗಲಾಟೆ |’ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ’: ಪೊಲೀಸ್ ಠಾಣೆ ಮುಂದೆ ಮಹಿಳೆಯರ ಪ್ರತಿಭಟನೆ

ನಾಗಮಂಗಲ ಗಲಾಟೆ |’ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ’: ಪೊಲೀಸ್ ಠಾಣೆ ಮುಂದೆ ಮಹಿಳೆಯರ ಪ್ರತಿಭಟನೆ

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವವರನ್ನು ಬಿಟ್ಟುಬಿಡುವಂತೆ ಪೊಲೀಸ್ ಠಾಣೆ ಮುಂದೆ ಬಂಧಿತರ ಸಂಬಂಧಿತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.


ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದವರ ಕುಟುಂಬಸ್ಥರು ನಾಗಮಂಗಲ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದು, ಪೊಲೀಸರು ಮನೆಯಲ್ಲಿದ್ದವರನ್ನು ಬಂಧಿಸಿದ್ದಾರೆ. ಕೂಡಲೇ ಅವರನ್ನು ಬಿಟ್ಟುಬಿಡುವಂತೆ ಬಂಧಿತರ ಸಂಬಂಧಿತ ಮಹಿಳೆಯರು ಆಗ್ರಹಿಸಿದ್ದಾರೆ.


ಪೊಲೀಸ್ ಠಾಣೆ ಎದುರು ಮಹಿಳೆಯರಿಂದ ದಿಢೀರ್ ಪ್ರತಿಭಟನೆ ನಡೆದಿದ್ದು, ಠಾಣೆಯ ಎದುರಿನ ರಸ್ತೆಯಲ್ಲಿ ಧರಣಿ ಕುಳಿತಿದ್ದಾರೆ. ಬಳಿಕ ಮಹಿಳೆಯರೊಂದಿಗೆ ಮಾತನಾಡಿದ ಎನ್ ಸ್ಪೆಕ್ಟರ್ ನಿರಂಜನ್ ಅವರು, ‘ವಿಚಾರಣೆ ಮಾಡಲು ಕರೆತಂದಿದ್ದೇವೆ. ಯಾರು ತಪ್ಪು ಮಾಡಿಲ್ಲ ಅವರನ್ನು ಬಿಟ್ಟು ಕಳುಹಿಸುತ್ತೇವೆ. 144 ಸೆಕ್ಷನ್ ಜಾರಿಯಾಗಿದ್ದು, ಗುಂಪುಗೂಡದೆ ಮನೆಗೆ ತೆರಳಿ ಎಂದು ಮಹಿಳೆಯರನ್ನು ಕಳಿಸಿದ್ದಾರೆ.

Join Whatsapp
Exit mobile version