ಜಂತರ್ ಮಂತರ್ ನಲ್ಲಿ ಬಿಲ್ಕಿಸ್ ಬಾನು ಬೆಂಬಲಿಸಿ ಮಹಿಳೆಯರಿಂದ ಧರಣಿ

Prasthutha|

ನವದೆಹಲಿ: 2002ರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರಕಾರದ ನಡೆಯ ವಿರುದ್ಧ ಜಂತರ್ ಮಂತರ್ ನಲ್ಲಿ ಮಹಿಳೆಯರಿಂದ ಪ್ರತಿಭಟನೆ ನಡೆಯಿತು.

- Advertisement -

ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿರುವ ನಿರ್ಧಾರವು ಅತ್ಯಂತ ನಾಚಿಕೆಗೇಡಿನ ವಿಷಯವಾಗಿದೆ. ಇದು ಭಾರತದ ವರ್ಚಸ್ಸನ್ನು ಜಗತ್ತಿನ ಎದುರು ಕಡಿಮೆ ಮಾಡಿದ್ದು, ದೇಶವನ್ನು ಅತ್ಯಾಚಾರದ ಪರ ದೇಶವನ್ನಾಗಿ ಮಾಡುತ್ತದೆ. ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಕ್ರಮವನ್ನು ರದ್ದುಗೊಳಿಸುವಂತೆ ಹಾಗೂ ಗುಜರಾತ್ ಸರಕಾರದ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿದರು.

2002ರ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ  11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಪರಿಹಾರ ನೀತಿಯಡಿ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಗೊಳಿಸಿತ್ತು.

Join Whatsapp