ಕಟ್ಟಡ ಉರುಳಿ ಬಿದ್ದು ಮಹಿಳಾ ಟೆಕ್ಕಿ ಮೃತ್ಯು

Prasthutha|

ಚೆನ್ನೈ: ಕಟ್ಟಡ ಉರುಳಿ ಬಿದ್ದ ಪರಿಣಾಮ ಮಹಿಳಾ ಟೆಕ್ಕಿಯೊಬ್ಬರು ಮೃತಪಟ್ಟಿರುವ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದಲ್ಲಿ ನಡೆದಿದೆ.

- Advertisement -

ಪದ್ಮ ಪ್ರಿಯಾ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮಧುರೈ ನಿವಾಸಿಯಾಗಿರುವ ಈಕೆ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಪದ್ಮಪ್ರಿಯ ಅವರು ತನ್ನ ಗೆಳತಿಯ ಜೊತೆಗೆ ಮೆಟ್ರೋ ಸ್ಟೇಷನ್ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕಟ್ಟಡ ಏಕಾಏಕಿ ಇವರ ಮೇಲೆ ಬಿದ್ದಿದೆ. ಕೂಡಲೇ ಸ್ಥಳೀಯರು ಅವರನ್ನು ರಕ್ಷಣೆ ಮಾಡಲು ಪ್ರಯತ್ನಿಸಿದ್ದಾರೆ. ನಂತರ ಕಟ್ಟಡದ ಅವಶೇಷಗಳಡಿಯಿಂದ ಹೊರತೆಗೆದು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಪದ್ಮ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

- Advertisement -