ತನ್ನ ಮಗುವನ್ನು ಕೈಯ್ಯಲ್ಲಿ ಹಿಡಿದುಕೊಂಡು ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಮಹಿಳಾ ಟ್ರಾಫಿಕ್ ಪೊಲೀಸ್ । ವೀಡಿಯೋ ವೈರಲ್ !

Prasthutha|

ಚಂಡೀಗಢದ ಮಹಿಳಾ ಟ್ರಾಫಿಕ್ ಪೊಲೀಸ್ ಪೇದೆಯೋರ್ವರು ತನ್ನ ಹಸುಗೂಸನ್ನು ಕೈಯ್ಯಲ್ಲಿ ಹಿಡಿದುಕೊಂಡೇ ಟ್ರಾಫಿಕ್ ನಿಯಂತ್ರಣ ಮಾಡುತ್ತಿರುವ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಆ ಮಹಿಳಾ ಟ್ರಾಫಿಕ್ ಪೇದೆಯನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ಚಂಡೀಗಢದ ಸೆಕ್ಟರ್ 15/16/23/24 ರಲ್ಲಿ ತನ್ನ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಸಮಯದಲ್ಲಿ ತನ್ನ ಮಗುವನ್ನು ಕೈಯ್ಯಲ್ಲಿ ಹಿಡಿದುಕೊಂಡಿರುವುದು ವೀಡಿಯೋದಲ್ಲಿ ಕಾಣಿಸುತ್ತಿದೆ.

- Advertisement -

ಆ ರಸ್ತೆಯ ಮೂಲಕ ಸಾಗುತ್ತಿದ್ದ ವಾಹನ ಚಾಲಕನೋರ್ವ ರೆಕಾರ್ಡ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Join Whatsapp