ಮಾ. 8ರಂದು ಮಹಿಳಾ ದಿನಾಚರಣೆ| ಅಭಿಮಾನಿಗಳಿಗೆ ಉಚಿತ ಟಿಕೆಟ್ ಘೋಷಿಸಿದ WPL

Prasthutha|

ಮುಂಬೈ | ವಿಮೆನ್ಸ್ ಪ್ರೀಮಿಯರ್ ಲೀಗ್ (WPL) ಮಾರ್ಚ್ 8ರಂದು ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಮುಂಬೈನ ಬ್ರಬೋರ್ನ್ ಕ್ರೀಡಾಂಗಣಕ್ಕೆ ಅಭಿಮಾನಿಗಳಿಗೆ ಉಚಿತ ಪ್ರವೇಶವನ್ನು ಘೋಷಿಸಿದೆ.

- Advertisement -

ಮಾರ್ಚ್ 8 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯಕ್ಕೆ ಎಲ್ಲಾ ಅಭಿಮಾನಿಗಳಿಗೆ ಪ್ರವೇಶ ಉಚಿತವಾಗಿರುತ್ತದೆ. ಈ ಬಗ್ಗೆ ಸ್ವತಃ ವಿಮೆನ್ಸ್ ಪ್ರೀಮಿಯರ್ ಲೀಗ್ ಅಧಿಕೃತವಾಗಿ ಘೋಷಿಸಿದೆ.

ಭಾರತದಲ್ಲಿ ಮಹಿಳಾ ಕ್ರಿಕೆಟ್ ಅನ್ನು ಉತ್ತೇಜಿಸಲು ಎಲ್ಲಾ ವಿಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಮಹಿಳೆಯರು ಮತ್ತು ಬಾಲಕಿಯರಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಬಿಸಿಸಿಐ ಘೋಷಿಸಿದೆ.

- Advertisement -

ವಿಮೆನ್ಸ್ ಪ್ರೀಮಿಯರ್ ಲೀಗ್ ಮಾ. 4ರಂದು ಪ್ರಾರಂಭವಾಗಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Join Whatsapp